ಬೆಳ್ತಂಗಡಿ:(ಮಾ.5) ಕರಾವಳಿ ಭಾಗದಲ್ಲಿ ಧಾರ್ಮಿಕ ಕೇಂದ್ರಗಳಿಗೆ ಬರುವ ಜನರನ್ನು ಇತರೆ ಪ್ರವಾಸೋದ್ಯಮ ಸ್ಥಳಗಳಿಗೆ ಆಕರ್ಷಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಶಾಸಕ ಹರೀಶ್ ಪೂಂಜ ಆಗ್ರಹಿಸಿದರು.

ಇದನ್ನೂ ಓದಿ: 🛑ವಿಟ್ಲ: ಚಂದಳಿಕೆ ಬಳಿ ಭಾರೀ ಸ್ಫೋಟದ ಸದ್ದು
ಬಿಜೆಪಿ ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ರಾಜ್ಯ ಪ್ರವಾಸೋದ್ಯಮ ನೀತಿ ವಿಚಾರವಾಗಿ ಕರಾವಳಿ ಭಾಗವನ್ನು ವಿಶೇಷವಾಗಿ ಪರಿಗಣಿಸಬೇಕು ಎಂದು ಕೇಳಿದಾಗ ಪ್ರವಾಸೋದ್ಯಮ ಸಚಿವರು ಈ ಬಗ್ಗೆ ನಾವು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ.
ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು, ಮಂಗಳೂರು ಹಾಗೂ ಕರಾವಳಿ ಭಾಗದಲ್ಲಿ ಬಹುತೇಕ ಯುವಕರು ಗೆದ್ದು ಶಾಸಕರಾಗಿದ್ದಾರೆ.



ರಾಜ್ಯದಲ್ಲಿ ಆರೋಗ್ಯ ಪ್ರವಾಸೋದ್ಯಮ, ಧಾರ್ಮಿಕ ಪ್ರವಾಸೋದ್ಯಮ, ವಾಣಿಜ್ಯೋದ್ಯಮ ಸೇರಿದಂತೆ ದೊಡ್ಡ ಅವಕಾಶ ಕರಾವಳಿ ಭಾಗದಲ್ಲಿದೆ. ಹೀಗಾಗಿ ಸಚಿವ ಹೆಚ್.ಕೆ ಪಾಟೀಲ್ ಅವರು ದೊಡ್ಡ ಕನಸು ಕಂಡಿದ್ದು, ನಾವು ಈ ಬಗ್ಗೆ ಸಾಕಷ್ಟು ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
