ಬೆಳ್ತಂಗಡಿ:(ಮಾ.5) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಆಯೋಜಿಸಿದ ದ್ವಿತೀಯ ಚರಣ/ ಗರಿ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬುಲ್ ಬುಲ್ಸ್ ವಿದ್ಯಾರ್ಥಿಗಳು ತೇರ್ಗಡೆಗೊಂಡು,


ಇದನ್ನೂ ಓದಿ: ☪ಬೆಳ್ತಂಗಡಿ: ಮಲ್‌ಜಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ
ಪ್ರಶಸ್ತಿ ಪತ್ರವನ್ನು ಸ್ವೀಕರಿಸಿರುತ್ತಾರೆ. ಇವರಿಗೆ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ಸೂಚನೆಯ ಮೇರೆಗೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪ್ರಮೀಳಾ ತರಬೇತಿಯನ್ನು ನೀಡುತ್ತಿದ್ದಾರೆ.



