ವಿಟ್ಲ:(ಮಾ.5) ಭಾರೀ ದೊಡ್ಡ ಮಟ್ಟದಲ್ಲಿ ಸ್ಪೋಟಕ ಶಬ್ದ ಕೇಳಿದ ಹಿನ್ನೆಲೆಯಲ್ಲಿ ಚಂದಳಿಕೆ ಸುತ್ತಮುತ್ತಲಿನ ಜನತೆ ಬೆಚ್ಚಿ ಬಿದ್ದ ಘಟನೆ ನಡೆದಿದೆ.

ಇದನ್ನೂ ಓದಿ: ಉಜಿರೆ : ಉಜಿರೆ ಶ್ರೀ ಧ.ಮಂ.ಕಾಲೇಜಿನಲ್ಲಿ “Meaning Success :A project Evaluation ” ಕಾರ್ಯಕ್ರಮ
ವಿಟ್ಲ, ಕಂಬಳಬೆಟ್ಟು, ಮೇಗಿನಪೇಟೆ, ಚಂದಳಿಕೆ ಸುತ್ತಮುತ್ತಲಿನಲ್ಲಿ ಸಾಯಂಕಾಲದ ವೇಳೆ ಭಾರೀ ಪ್ರಮಾಣದಲ್ಲಿ ಶಬ್ದ ಕೇಳಿದೆ. ಇದನ್ನು ಗಮನಿಸಿದ ಹಲವು ಮಂದಿ ಭೂಕಂಪನ ಸಂಭವಿಸಿರಬಹುದೆಂದು ಊಹಿಸಿದ್ದರು.


ಬಳಿಕ ವಿಚಾರಿಸಿದಾಗ ಮಾಡತ್ತಡ್ಕದಲ್ಲಿರುವ ಕಲ್ಲಿನ ಕೋರೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕೋರೆ ಮಾಲೀಕ ಕೋರೆ ಸಮೀಪದ ಗುಡ್ಡದಲ್ಲಿ ಭಾರೀ ಪ್ರಮಾಣದ ಸ್ಪೋಟಕಗಳನ್ನು ಶೇಖರಿಸಿಟ್ಟಿದ್ದ.

ಬಿಸಿಲಿನ ತಾಪಕ್ಕೆ ಅದು ಸ್ಫೋಟಗೊಂಡಿದೆ. ಇದರಿಂದ ಎರಡು ಮನೆಯ ಗೋಡೆ ಬಿರುಕುಗೊಂಡಿದೆ. ಕಿಟಕಿಯ ಗಾಜು ಪುಡಿಯಾಗಿದೆ. ಘಟನಾ ಸ್ಥಳದಲ್ಲಿ ಜನರು ಜಮಾವಣೆಯಾಗಿದ್ದು,

ಕೋರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.
