ಮಣಿಪಾಲ :(ಮಾ.6) ಬೆಂಗಳೂರಿನ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪುತ್ತೂರು ಉದ್ಯಮಿಯ ಬಳಿ ದರೋಡೆ ಪ್ರಕರಣ ಸಂಬಂಧ ಗರುಡ ಗ್ಯಾಂಗ್ ಕುಖ್ಯಾತ ಸದಸ್ಯ ಇಸಾಕ್ ಉಡುಪಿಯಲ್ಲಿ ಇರುವ ಬಗ್ಗೆ ಮಾಹಿತಿ ಪಡೆದು ಮಾ.4 ರಂದು ರಾತ್ರಿ ನೆಲಮಂಗಲ ಪೊಲೀಸರು ಮತ್ತು ಮಣಿಪಾಲ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಥಾರ್ ಜೀಪ್ ನಲ್ಲಿ ತಪ್ಪಿಸಿಕೊಂಡು ವಿವಿಧ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ವಾಹನದಿಂದ ಹಾರಿ ಪರಾರಿಯಾದ ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 🛑ನಾರಾವಿ: ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು!
ಈ ಪ್ರಕರಣ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪರಾರಿಯಾದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮತ್ತು ಆತನ ಪ್ರೇಯಸಿ ವಿರುದ್ಧ ಕೊಲೆ ಯತ್ನ ಹಾಗೂ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಯಸಿಯನ್ನು ಬಂಧಿಸಿ ಉಡುಪಿ ನ್ಯಾಯಾಲಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಮಣಿಪಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ಗರುಡ ಗ್ಯಾಂಗ್ ಸದಸ್ಯ ಇಸಾಕ್ ಪ್ರೇಯಸಿ ಕಾಸರಗೋಡು ನಿವಾಸಿಯಾಗಿರುವ 23 ವರ್ಷದ ಲಾ ಕಾಲೇಜು ವಿದ್ಯಾರ್ಥಿನಿ ಥಾರ್ ವಾಹನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಇಸಾಕ್ ಪರಾರಿಯಾಗಲು ಬಳಸಿದ ಥಾರ್ ವಾಹನ ಸ್ನೇಹಿತನಿಗೆ ಸೇರಿದ್ದು ಎನ್ನಲಾಗಿದೆ. ಈ ವಾಹನದಲ್ಲಿ ಮಾರಕಾಸ್ತ್ರಗಳು ಪೊಲೀಸರಿಗೆ ಪತ್ತೆಯಾಗಿದೆ. ಆರೋಪಿ ಇಸಾಕ್ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ ಎಂದು ಉಡುಪಿ ಎಸ್ಪಿ ತಿಳಿಸಿದ್ದಾರೆ.


ಮಣಿಪಾಲ ಪೊಲೀಸ್ ಠಾಣೆಯಲ್ಲಿ ಮಾ.5 ರಂದು ಬಿ.ಎನ್.ಎಸ್ 109, Arms Act ಅಡಿಯಲ್ಲಿ ಇಬ್ಬರು ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಪ್ರೇಯಸಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಹೆಚ್ಚಿನ ವಿಚಾರಣೆಗಾಗಿ ಮಣಿಪಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
