Mon. Mar 10th, 2025

Mangaluru: ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ – ಎಬಿವಿಪಿ ಸಂಘಟನೆಯಿಂದ ಮಂಗಳೂರಿನಲ್ಲಿ ಪ್ರತಿಭಟನೆ

ಮಂಗಳೂರು:(ಮಾ.8) ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಬಿವಿಪಿ ಸಂಘಟನೆಯು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.

ಇದನ್ನೂ ಓದಿ:⭕ಉಜಿರೆ: ಬೈಕ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ


ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಎಬಿವಿಪಿ ಸಂಘಟನೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಪೋಲಿಸ್ ಇಲಾಖೆ ವಿರುದ್ಧ ವಿಧ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ದಿಗಂತ್ ನಾಪತ್ತೆ ಪ್ರಕರಣದ ಹಿಂದೆ ಅನ್ಯಮತೀಯರ ಕೈವಾಡದ ಶಂಕೆ ಇದೆ ಎಂಬ ಆರೋಪಗಳಿದ್ದರೂ, ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳದೆ ಯಾವುದೇ ಸುಳಿವುಗಳನ್ನು ಪತ್ತೆ ಹಚ್ಚದಿರುವುದು ಖಂಡನೀಯ ಎಂದರು.

ಪೊಲೀಸ್ ಇಲಾಖೆ ಈ ವಿಷಯದ ಕುರಿತು ಪ್ರಶ್ನಿಸಿದ ಸಂದರ್ಭದಲ್ಲಿ ಕಾಲಾವಕಾಶಗಳನ್ನು ಕೇಳಿ ಸಮಯ ಕಳೆಯುವ ಪ್ರಯತ್ನವನ್ನು ಮಾಡುತ್ತಿದೆ.

ಈಗಾಗಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಈ ವಿಷಯಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಕ್ತ ತನಿಖೆಗಾಗಿ ಮನವಿ ನೀಡಿದ್ದು ಇನ್ನೂ ಯಾವುದೇ ಸುಳಿವು ಪತ್ತೆ ಮಾಡದಿರುವುದು ಜನ ಸಾಮಾನ್ಯರು ಹಾಗೂ ವಿದ್ಯಾರ್ಥಿಗಳು ಪೋಲಿಸ್ ಇಲಾಖೆಯ ಮೇಲೆ ಇಟ್ಟಂತಹ ನಂಬಿಕೆಯನ್ನು ಕಳೆದುಕೊಳ್ಳುವ ಹಾಗೆ ಮಾಡಿದೆ ಎಂದು ಆರೋಪಿಸಿದರು.

ಈ ಪ್ರಕರಣವನ್ನು ಮತ್ತಷ್ಟು ಗಂಭೀರವಾಗಿ ಪರಿಗಣಿಸಿ, ಪಾರದರ್ಶಕ ತನಿಖೆ ನಡೆಸಬೇಕು. ಒಂದು ವೇಳೆ ಪೋಲಿಸ್ ಇಲಾಖೆ ಇದರಲ್ಲಿ ವಿಫಲವಾದಲ್ಲಿ ಮತ್ತಷ್ಟು ತೀವು ಹೋರಾಟವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *