ಉಜಿರೆ:(ಮಾ.8) ಉಜಿರೆಯಲ್ಲಿ ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.
ಉಜಿರೆ ನಿವಾಸಿ ಜಯಂತ್ (56ವ) ಮೃತ ವ್ಯಕ್ತಿ.

ಇದನ್ನೂ ಓದಿ: 🟣ಉಜಿರೆ: ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NMAMIT) ಯ
ಇವರು ಮಾ.7ರಂದು ರಾತ್ರಿಯ ವೇಳೆ ಉಜಿರೆಯ ಭಾರತ್ ಶೋರೂಂ ಬಳಿ ಅಜಿತ್ ನಗರದ ರಸ್ತೆಗೆ ತಿರುಗಿಸುವ ವೇಳೆ ಉಜಿರೆ ಕಡೆಗೆ ಬರುತ್ತಿದ್ದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ.



ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಜಯಂತ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಮೃತಪಟ್ಟಿದ್ದಾರೆ.

ಬೈಕ್ ಸವಾರ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
