Mon. Mar 10th, 2025

Arasinamakki: 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

ಅರಸಿನಮಕ್ಕಿ (ಮಾ. 9): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್ ಅರಸಿನಮಕ್ಕಿ ಮತ್ತು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 31ನೇ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಅರಸಿನಮಕ್ಕಿಯ ಹತ್ಯಡ್ಕ ಸಿ ಎ ಬ್ಯಾಂಕಿನ ಸಭಾಂಗಣದಲ್ಲಿ ಮಾರ್ಚ್ 9 ರಂದು ನಡೆಯಿತು.

ಇದನ್ನೂ ಓದಿ:☪ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ರಂಝಾನ್ ಆಧ್ಯಾತ್ಮಿಕ ಕಾರ್ಯಕ್ರಮ

ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ. ದೀಪ ಜ್ಯೋತಿ ಹೇಗೆ ಬೆಳಗುತ್ತ ಹಾಗೆ ನೀವು ಟೈಲರಿಂಗ್ ವಿದ್ಯೆಯನ್ನು ಕಲಿತು ಒಳ್ಳೆಯ ರೀತಿಯಲ್ಲಿ ಸಮಾಜದಲ್ಲಿ ಬೆಳಗಬೇಕು ಎಂದು ಶುಭಹಾರೈಸಿದರು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಧೀರ್ ಕುಮಾರ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಅಧ್ಯಕ್ಷರಾದ ಶ್ರೀಮತಿ ಶಾಂತ ಪಿ ಶೆಟ್ಟಿ, ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ಮಹಿಳಾ ಕಾರ್ಯದರ್ಶಿ ಶ್ರೀಮತಿ ನೀತಾ ರಾಜೇಶ್ ಆಚಾರ್ಯ, ಅರಸಿನಮಕ್ಕಿ ಹಿರಿಯ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ಶಕುಂತಳಾ ಎಂ ಆಚಾರ್ ಮತ್ತು ಟೈಲರಿಂಗ್ ತರಬೇತುದಾರರಾದ ಶ್ರೀಮತಿ ರೇಷ್ಮಾ ಜಯಪ್ರಸಾದ್ ಶೆಟ್ಟಿ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಒಟ್ಟು 31 ಮಂದಿ ಶಿಬಿರಾರ್ಥಿಗಳು ಭಾಗವಹಿಸಿದ್ದರು. ಶ್ರೀಮತಿ ಧನ್ಯ ಸ್ವಾಗತಿಸಿ, ಸೇವಾಭಾರತಿಯ ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಭಾರತಿ ಧನ್ಯವಾದವಿತ್ತರು.

Leave a Reply

Your email address will not be published. Required fields are marked *