Wed. Mar 12th, 2025

Belthangady: ಆಕಸ್ಮಿಕ ಬೆಂಕಿಗೆ ಮನೆ ಸುಟ್ಟು ಭಸ್ಮ – ಪ್ರಾಣಾಪಾಯದಿಂದ ಪಾರಾದ ಮನೆಮಂದಿ

ಬೆಳ್ತಂಗಡಿ, ಮಾ.11(ಯು ಪ್ಲಸ್ ಟಿವಿ): ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಮನೆಯೊಂದು ಸುಟ್ಟು ಕರಕಲಾದ ಘಟನೆ ಬೆಳ್ತಂಗಡಿ ತಾಲೂಕಿನ ಕರಿಮಣೇಲು ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಇದನ್ನೂ ಓದಿ: ⭕ಉಡುಪಿ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ

ಇಲ್ಲಿನ ಕಲ್ಯಾರಡ್ಡದ ಸತೀಶ್ ನಾಯಕ್ ಎಂಬವರ ಮನೆ ಸುಟ್ಟು ಭಸ್ಮವಾಗಿದೆ. ಬೆಳಗ್ಗೆ ಸುಮಾರು 10 ಗಂಟೆಯ ವೇಳೆ ಈ ಅವಘಡ ಸಂಭವಿಸಿದೆ ಅನ್ನುವ ಮಾಹಿತಿಗಳು ಲಭ್ಯವಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಹುದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಇನ್ನು ಘಟನೆಯ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ವಿದ್ಯುತ್ ಶಾರ್ಟ್ ಸಕ್ಯೂರ್ಟ್ನಿಂದ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಅಂತ ಹೇಳಲಾಗುತ್ತಿದೆ. ಮೊದಲೇ ಬಹಳಷ್ಟು ಬಡತನದಲ್ಲಿ ಜೀವನ ನಡೆಸುತ್ತಿದ್ದ ಈ ಕುಟುಂಬಕ್ಕೆ ಬೆಂಕಿ ಅವಘಡ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಈ ನಿಟ್ಟಿನಲ್ಲಿ ಸಹೃದಯಿ ದಾನಿಗಳ ನೆರವಿಗಾಗಿ ಸತೀಶ್ ನಾಯಕ ಕುಟುಂಬ ಕಾಯುತ್ತಿದೆ. ಇವರಿಗೆ ಸಹಾಯ ಮಾಡಲು ಇಚ್ಚಿಸುವವರು ಈ ಕೆಳಗಿನ ನಂಬರ್ ಅನ್ನು ಸಂಪರ್ಕ ಮಾಡಬಹುದು. ಫೋನ್ ನಂಬರ್ : 9591994971

Leave a Reply

Your email address will not be published. Required fields are marked *