Wed. Mar 12th, 2025

Madikeri: ಕೊಡಗು ಜಿಲ್ಲೆಯ ಹಲವೆಡೆ ಲಘು ಭೂಕಂಪ

ಮಡಿಕೇರಿ(ಮಾ.12): ಕೊಡಗು ಜಿಲ್ಲೆಯ ಹಲವೆಡೆ ಮಾ.12 ರಂದು ಭೂಮಿ ಕಂಪಿಸಿದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ.

ಇದನ್ನೂ ಓದಿ: 🟣ಬಂದಾರು : ಬಂದಾರು ಗ್ರಾಮ ಪಂಚಾಯತ್ ನಿಂದ ನಿವೃತ್ತಿ ಪಡೆದ ಸಿಬ್ಬಂದಿ ಮೋಹನ್ ಬಂಗೇರ ರವರಿಗೆ ಸನ್ಮಾನ ಕಾರ್ಯಕ್ರಮ

ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸದ್ಯ, ಈ ವಿಚಾರದ ಬಗ್ಗೆ ಭೂ ವಿಜ್ಞಾನಿಗಳಿಗೆ ಮಾಹಿತಿ ನೀಡಲು ಗ್ರಾಮ ಪಂಚಾಯತ್ ಅಧಿಕಾರಿಗಳು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *