ದೆಹಲಿ:(ಮಾ.13) ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಸೌಕರ್ಯ ಸುಧಾರಣೆ ಅದರಲ್ಲೂ ಪ್ರಮುಖವಾಗಿ ಶಿರಾಡಿ ಘಾಟ್ ಬೈಪಾಸ್ ಸಮಸ್ಯೆಯನ್ನು ತುರ್ತಾಗಿ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಕೋರಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: 🟠ಉಜಿರೆ: “ಮಹಿಳೆ ಮತ್ತು ಹೂಡಿಕೆ ಭವಿಷ್ಯದ ಬೆಳವಣಿಗೆಯ ಸೇತು”
ಈ ಮಹತ್ವದ ಹೆದ್ದಾರಿ ಯೋಜನೆಯನ್ನು ಮುಂದುವರಿಸಲು ಅರಣ್ಯ ಇಲಾಖೆ ಸಹಿತ ಅಗತ್ಯ ಅನುಮತಿಗಳಿಗೆ ಇರುವ ಆಡಳಿತಾತ್ಮಕ ಅಡೆ-ತಡೆಗಳನ್ನು ನಿವಾರಿಸಲು ಹಾಗೂ ಕೆಲ ಅಧಿಕಾರಶಾಹಿ ಅಡೆ-ತಡೆ ನಿವಾರಣೆಗೆ ರಾಜ್ಯ ಸರ್ಕಾರಕ್ಕೆ ತುರ್ತಾಗಿ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲು ಮಾನ್ಯ ಸಚಿವರ ಮಧ್ಯಪ್ರವೇಶವನ್ನು ಸಂಸದರು ಕೋರಿಕೊಂಡರು




ಹಾಗೂ ಇದೇ ವೇಳೆ ಈ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಿಸ್ತೃತ ಯೋಜನಾ ವರದಿಯ ಪ್ರಗತಿ ಹಾಗೂ ಮಂಗಳೂರು-ಬೆಂಗಳೂರು ಮಾರ್ಗದಲ್ಲಿ ನಡೆಯುತ್ತಿರುವ ಇತರ ಕಾಮಗಾರಿಗಳ ಬಗ್ಗೆ ಸಚಿವರಿಗೆ ಅವರು ಮಾಹಿತಿ ನೀಡಿದರು.
