ವೇಣೂರು:(ಮಾ.13) ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದ ಘಟನೆ ವೇಣೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.

ಇದನ್ನೂ ಓದಿ: ⭕ಕೋಲಾರ: ಕಾಮದ ತೀಟೆಗೆ ಮಗಳನ್ನೇ ಬಳಸಿಕೊಂಡ ತಂದೆ
ಬೆಳ್ತಂಗಡಿಯಿಂದ ಮೂಡಬಿದಿರೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೂಡಬಿದಿರೆ ಕಡೆಯಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.




