ಬಂಟ್ವಾಳ:(ಮಾ.20) ಕಳೆದ ಒಂದು ವಾರಗಳ ಹಿಂದೆ ಫರಂಗಿಪೇಟೆ ಎಂಬಲ್ಲಿ ಕಾರು ಮತ್ತು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಸ್ಪತ್ರೆಗೆ ದಾಖಲಾಗಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಪುದು ಗ್ರಾಮದ ಕುಮ್ಡೆಲು ನಿವಾಸಿ ರವಿ(54) ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಾ.13 ರಂದು ಫರಂಗಿಪೇಟೆ ಎಂಬಲ್ಲಿ ಸಂಜೆ 6 ಗಂಟೆ ಅಂದಾಜಿಗೆ ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿತ್ತು.

ಅ ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ,ತುರ್ತು ಚಿಕಿತ್ಸೆ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ , ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಪೋಲೀಸ್ ಮೂಲಗಳು ತಿಳಿಸಿವೆ.

ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
