ಮಂಗಳೂರು:(ಮಾ.20) ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ಕಿನ್ನಿಗೋಳಿಯ ಬಟ್ಟಕೋಡಿ ಎಂಬಲ್ಲಿ ನಡೆದಿದೆ.

ಧಾರವಾಡದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಹಾಗೂ ನವೀನ್ ಹೂಗಾರ (26) ಮೃತ ದುರ್ದೈವಿಗಳು.




ಅತೀ ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಆತ್ಮಾನಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ನವೀನ್ ಹೂಗಾರ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

