ಉಡುಪಿ (ಮಾ.20): ಕೇವಲ ಮೀನು ಕದ್ದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆ ಕೃಷ್ಣನಗರಿ ಉಡುಪಿ ತಾಲೂಕಿನ ಮಲ್ಪೆ ಮೀನುಗಾರಿಕ ಬಂದರಿನಲ್ಲಿ ನಡೆದಿದೆ.

ಸದ್ಯ ದುಷ್ಕೃತ್ಯ ಎಸಗಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ ಮೀನು ಕದ್ದ ಆರೋಪದ ಹಿನ್ನಲೆ ಮಹಿಳೆ ಕಪಾಳಕ್ಕೆ ಬಾರಿಸಿ ಅಮಾನವೀಯವಾಗಿ ವರ್ತಿಸಲಾಗಿದೆ. ಘಟನೆ ವೇಳೆ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



ಮೀನು ಕದ್ದ ಆರೋಪದ ಮೇಲೆ ಲಕ್ಷ್ಮೀ ಬಾಯಿ ಎಂಬುವವರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿದೆ. ಸದ್ಯ ಪೊಲೀಸರು ಸುಂದರ್, ಶಿಲ್ಪ ಹಾಗೂ ಇನ್ನೋರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

