ಉಜಿರೆ :(ಮಾ.20) ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಮಾ.20 ರಂದು ಸುಸಜ್ಜಿತವಾದ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗಾಗಿ ನವೀಕೃತ ಕಟ್ಟಡ ಮತ್ತು ಆಟದ ಮನೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.


ಇದನ್ನೂ ಓದಿ: ⭕ಕಿನ್ನಿಗೋಳಿ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ
ಸಿಸ್ಟರ್ ಸರಿತಾ ಹಾಗೂ ಸಹಶಿಕ್ಷಕಿ ಫಿಲೋಮಿನಾ ಇವರ ಪ್ರಾರ್ಥನಾ ವಿಧಿಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ವಂದನೀಯ ಫಾ! ಅಬೆಲ್ ಲೋಬೊ ಅವರು ರಿಬ್ಬನ್ ಕತ್ತರಿಸುವ ಮೂಲಕ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ನವೀಕೃತ ಕೊಠಡಿಗೆ ಆಶೀರ್ವಚನಗೈದು ಶುಭ ಹಾರೈಸಿದರು.

ಶಾಲಾ ಪ್ರಾಂಶುಪಾಲರಾದ ವಂದನೀಯ ಫಾ! ವಿಜಯ್ ಲೋಬೊ ಅವರು ತಮ್ಮ ಸಂದೇಶದಲ್ಲಿ ಈ ನವೀಕರಣದ ಮಹತ್ವವನ್ನು ವಿವರಿಸಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಾಲೆಯ ಪ್ರಯತ್ನಗಳ ಬಗ್ಗೆ ತಿಳಿಸಿ ಶುಭ ಹಾರೈಸಿದರು.


ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಆಂಟನಿ ಫರ್ನಾಂಡಿಸ್, ಶ್ರೀ ಲಿಗೋರಿವಾಸ್, ಚರ್ಚ್ ಪಾಲನಾ ಮಂಡಳಿ ಸಮಿತಿಯ ಸದಸ್ಯರಾದ ಶ್ರೀ ಪ್ರವೀಣ್ ವಿಜಯ್ ಡಿಸೋಜ ಹಾಗೂ ಕಾಂಟ್ರಾಕ್ಟರ್ ಶ್ರೀ ಅನಿಲ್ ಡಿಸೋಜ ರವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಶಾಲೆಯ ಸಿಬ್ಬಂದಿ ವರ್ಗದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಹ ಶಿಕ್ಷಕ ಶ್ರೀ ರವಿಕುಮಾರ್ ಇವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.
