ಬೆಂಗಳೂರು, (ಮಾ.21): ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ಹೋಟೆಲ್ವೊಂದರ ಸಪ್ಲೈಯರ್ ಬ್ಯಾಗ್ನಲ್ಲಿ ಸ್ಫೋಟಕ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಬೆಂಗಳೂರಿನ ಸಂಪಿಗೆಹಳ್ಳಿ ಬಳಿಯ ಅಬ್ದುಲ್ ರೆಹಮಾನ್ ಎನ್ನುವಾತನ ಬ್ಯಾಗ್ನಲ್ಲಿ ಹ್ಯಾಂಡ್ ಗ್ರೆನೇಡ್ ಸಿಕ್ಕಿದೆ.

ಇದನ್ನೂ ಓದಿ: ⭕ಉಡುಪಿ: ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣ
ಹೋಟೆಲ್ ಸಿಬ್ಬಂದಿಯೊಬ್ಬರು, ಆಧಾರ್ ಕಾರ್ಡ್ಗಾಗಿ ಅಬ್ದುಲ್ ರೆಹಮಾನ್ನ ಬ್ಯಾಗ್ ಪರಿಶೀಲಿಸಿದಾಗ ಗ್ರೆನೇಡ್ ಪತ್ತೆಯಾಗಿದೆ. ಕೂಡಲೇ ಹೋಟೆಲ್ನವರು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.
ಬಳಿಕ ಸ್ಥಳಕ್ಕೆ ದೌಡಾಯಿಸಿದ ಸಂಪಿಗೆಹಳ್ಳಿ ಪೊಲೀಸರು ಮೊದಲಿಗೆ ಹೋಟೆಲ್ನವರಿಂದ ಮಾಹಿತಿ ಪಡೆದುಕೊಂಡು ನಂತರ ರೆಹಮಾನ್ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರೆನೇಡ್ ಕಂಡುಬಂದಿದೆ.


ಸದ್ಯ ಅಬ್ದುಲ್ ರೆಹಮಾನ್ ಹಾಗೂ ಈತನ ಬ್ಯಾಗ್ನಲ್ಲಿ ಸಿಕ್ಕ ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಬ್ ಮಾದರಿಯ ಸ್ಫೋಟಕವನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಮತ್ತೊಂದೆಡೆ ಕೋಗಿಕ್ರಾಸ್ ಬಳಿಯ ನಿವಾಸಿಯಾಗಿರುವ ಅಬ್ಧುಲ್ ರೆಹಮಾನ್ ನನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಅಬ್ದುಲ್ ರೆಹಮಾನ್ ತಾನು ಬೆಳ್ಳಹಳ್ಳಿಯ ನಿವಾಸಿ ಎಂದು ಹೇಳಿಕೊಂಡು ವೈಭವ್ ಹೋಟೆಲ್ನಲ್ಲಿ ಸಪ್ಲೈಯರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ. ಬಳಿಕ ಹೋಟೆಲ್ನವರು ಆಧಾರ್ ಕಾರ್ಡ್ ಕೇಳಿದ್ದಾರೆ.

ಆದ್ರೆ ಆತ ಕಾರ್ಡ್ ಕೇಳಿದಾಗ ಕೊಟ್ಟಿಲ್ಲ. ಎರಡು ದಿನಗಳು ಕಳೆದರೂ ಸಹ ಆಧಾರ್ ಕಾರ್ಡ್ ಕೊಟ್ಟಿಲ್ಲ. ಇದರಿಂದ ಹೋಟೆಲ್ ಸಿಬ್ಬಂದಿಯೊಬ್ಬರು ಶೆಡ್ನಲ್ಲಿದ್ದ ರೆಹಮಾನ್ನ ಬ್ಯಾಗ್ ಚೆಕ್ ಮಾಡಿದಾಗ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ. ಇದರಿಂದ ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
