ಬೆಳ್ತಂಗಡಿ :(ಮಾ.21) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವಿಗೀಡಾದ ಘಟನೆ ಕಾಶಿಪಟ್ಣ ಗ್ರಾಮದ ಕುಜಂಬೆಯಲ್ಲಿ ನಡೆದಿದೆ.

ಇದನ್ನೂ ಓದಿ: ⭕Karkala: ದೆಪ್ಪುತ್ತೆ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ
ಕುಜಂಬೆ ನಿವಾಸಿ ವಿಲ್ಫೆಡ್ ಫೆರ್ನಾಂಡಿಸ್ (51) ಅವರು ಸುಮಾರು 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.



ಫೆ. 14ರಂದು ಬೆಳಗ್ಗೆ ಮನೆ ಸಮೀಪದ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡಿದ್ದರು. ಅದನ್ನು ಕಂಡ ಸಹೋದರನು ಕೆಲಸದವರ ಜತೆ ಸೇರಿ ಕೆಳಗಿಳಿಸಿ ಮೂಡುಬಿದಿರೆ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಾ.18ರಂದು ಕೊನೆಯುಸಿರೆಳೆದಿದ್ದಾರೆ ಎಂದು ಸಹೋದರನು ಪೊಲೀಸರಿಗೆ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.
