Fri. Apr 4th, 2025

Bengaluru: ವಿಧಾನಸಭೆ ಕಲಾಪದಿಂದ 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು

ಬೆಂಗಳೂರು (ಮಾ.21): ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ.

ಇದನ್ನೂ ಓದಿ: ⭕ಉತ್ತರ ಪ್ರದೇಶ: ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ರೆಕಾರ್ಡ್

ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ 18 ಸದಸ್ಯರನ್ನು ಸ್ಪೀಕರ್ ಯು.ಟಿ. ಖಾದರ್ ಅಮಾನತುಗೊಳಿಸಿದ್ದಾರೆ.

ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ,

ಉಮಾನಾಥ ಕೋಟ್ಯಾನ್., ಸಿ.ಕೆ. ರಾಮಮೂರ್ತಿ. ಯಶ್‌ ಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯು.ಟಿ. ಖಾದರ್ ರೂಲಿಂಗ್ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *