ಕಾರ್ಕಳ:(ಮಾ.21) ಅಜೆಕಾರು ಗ್ರಾಮದ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಕುರಿತಂತೆ ಆರೋಪಿ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಾರ್ಕಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಂಚಾರಿ ಪೀಠದ ನ್ಯಾಯಾಲಯದ ನ್ಯಾಯಾಧೀಶ ಸಮೀವುಲ್ಲಾ ಅವರು ಜಾಮೀನು ಮಂಜೂರು ಮಾಡಲು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: 🛑Mangaluru : ನಿಯಂತ್ರಣ ತಪ್ಪಿ ರಿವರ್ಸ್ ಗೇರ್ ಹಾಕಿದ ಚಾಲಕ
ಜಾಮೀನಿಗೆ ಅರ್ಜಿ ಸಲ್ಲಿಸಿರುವ ಪ್ರತಿಮಾ ಅವರಿಗೆ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇನ್ನೋರ್ವ ಆರೋಪಿ ದಿಲೀಪ್ ಹೆಗ್ಡೆ (ಪ್ರತಿಮಾ ಪ್ರಿಯಕರ) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನೂ ನ್ಯಾಯಾಲಯ ವಜಾ ಮಾಡಿತ್ತು.




