ಬಂಟ್ವಾಳ:(ಮಾ.22) ಮಾ. 21ರ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ವರ್ತಮಾನದಂತೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ಬಂಟ್ವಾಳದ ಕಡಂಬು ಎಂಬಲ್ಲಿ ಕಾರ್ಯಾಚರಣೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಕಡಂಬು ಎಂಬಲ್ಲಿ ಪುತ್ತೂರು ಕಡೆಯಿಂದ ಮರದ ದಿಮ್ಮಿಗಳನ್ನು ತುಂಬಿಸಿಕೊಂಡು ಕೇರಳಕ್ಕೆ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ. ಸೊತ್ತು ಮತ್ತು ವಾಹನದ ಮೌಲ್ಯ 3.50 ಲಕ್ಷವಾಗಿದೆ.

ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ,ಉಪ ವಲಯ ಅರಣ್ಯಾಧಿಕಾರಿ ವಿನಯ ಕುಮಾರ್,ಶಿವಾನಂದ ಮಾಧರ, ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿದ್ದಾರೆ.



ಆರೋಪಿ ವಾಹನ ಚಾಲಕ ಅನ್ವರ್ ಸಾದತ್ ಅಮ್ಟೂರು ಇವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
