ಬಂಟ್ವಾಳ :(ಮಾ.22)ರಸ್ತೆ ದಾಟುತ್ತಿದ್ದ ಮಹಿಳೆಯೋರ್ವಳಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಫರಂಗಿಪೇಟೆ ಬಳಿ ಶುಕ್ರವಾರ ರಾತ್ರಿ ವೇಳೆ ನಡೆದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ⭕ವಿಟ್ಲ: ಪಾಳುಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ
10 ನೇ ಮೈಲುಕಲ್ಲು ನಿವಾಸಿ ವಸಂತಿ ಶೆಟ್ಟಿ ಅಪಘಾತದಲ್ಲಿ ಮೃತರಾದ ಮಹಿಳೆ ಆಗಿದ್ದಾರೆ.
ಫರಂಗಿಪೇಟೆ ಸಮೀಪದ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ 10ನೇ ಮೈಲುಕಲ್ಲು ಎಂಬಲ್ಲಿ ಪಾದಚಾರಿ ಮಹಿಳೆಯೋರ್ವರಿಗೆ ಮಂಗಳೂರು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ,


ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಚೆಂಡಿನಂತೆ ಹೊರಳುತ್ತಾ ಬಸ್ ನಿಲ್ದಾಣದ ಒಳಗಿನಿಂದ ಅಷ್ಟು ದೂರಕ್ಕೆ ಎಸೆಯಲ್ಪಡುವ ದೃಶ್ಯ ಸಿಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಈ ಅಪಘಾತದ ವಿಡಿಯೋ ವೈರಲ್ ಆಗಿದೆ.

ಅಗತ್ಯ ವಸ್ತುವಿಗಾಗಿ ಅಂಗಡಿಗೆ ತೆರಳುವ ಮಹಿಳೆಗೆ ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆಯೇ ಈ ಅಪಘಾತಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
