FIR Against Rajat And Vinay Gowda : (ಮಾ.24) ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಇಬ್ಬರಿಗೂ ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.

ವಿನಯ್ ಗೌಡ ಹಾಗೂ ರಜತ್ ಕಿಶನ್ ಇಬ್ಬರು, ಕೈಯಲ್ಲಿ ಲಾಂಗು, ಕಣ್ಣಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ರೀಲ್ಸ್ ಮಾಡಿದ್ದರು. ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಬೆನ್ನಲ್ಲೆ ಇಬ್ಬರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪೋಲಿಸರು ಎಫ್ಐಆರ್ ದಾಖಲಿಸಿದ್ದಾರೆ
ವಿನಯ್ ಗೌಡ ಹಾಗೂ ರಜತ್ ಅವರನ್ನು ಬಸವೇಶ್ವರ ನಗರ ಪೊಲೀಸರು ಮೌಖಿಕವಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಟ್ಟಿದ್ದಾರೆ. ಶೂಟಿಂಗ್ನಲ್ಲಿ ಹೊರಗಡೆ ಇರೋ ಕಾರಣ ರಜತ್ ಅವರು ಸಮಯವಕಾಶ ಕೇಳಿದ್ದಾರೆ. ಅಲ್ಲದೇ ಇಂದು ವಿಚಾರಣೆಗೆ ಹಾಜರಾಗೋದಾಗಿ ವಿನಯ್ ಗೌಡ ತಿಳಿಸಿದ್ದಾರೆ.




ಆದ್ರೆ ಇಲ್ಲೊಂದು ಗಮನಿಸಬೇಕಾದ ಅಂಶವೆಂದರೆ ಪೊಲೀಸರು ವಿಡಿಯೋ ಮಾಡಿದ್ದರಿಂದ ಎಫ್ಐಆರ್ ದಾಖಲಿಸಿದ್ರೂ ರಜತ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡ ವಿಡಿಯೋವನ್ನು ಡಿಲೀಟ್ ಮಾಡಿಲ್ಲ.
