Thu. Apr 3rd, 2025

Belagavi: ಮದುವೆಗೂ ಮುಂಚೆ ಯುವತಿ ಪ್ರೆಗ್ನೆಂಟ್ -ಯೂಟ್ಯೂಬ್ ನೋಡಿಕೊಂಡು ಸ್ವಯಂ ಡೆಲಿವರಿ‌ – ಆಮೇಲೆ ಆಗಿದ್ದೇನು ಗೊತ್ತಾ?!

ಬೆಳಗಾವಿ:(ಮಾ.25) ರಾಜ್ಯದಲ್ಲಿ ಒಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಯುವತಿ ಒಬ್ಬಳು ಮದುವೆಗೆ ಮುನ್ನ ಗರ್ಭಿಣಿಯಾಗಿದ್ದಾಳೆ. ಬಳಿಕ ಯೂಟ್ಯೂಬ್ ನೋಡಿಕೊಂಡು ತನಗೆ ತಾನೇ ಹೆರಿಗೆ ಮಾಡಿಕೊಂಡು, ಪ್ರಿಯಕರನ ಜೊತೆ ಸೇರಿ ಆ ಮಗುವನ್ನು ಹತ್ಯೆ ಮಾಡಿದ್ದಾಳೆ.

ಇದನ್ನೂ ಓದಿ; ⭕ಪುತ್ತೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಭಕ್ತಕೋಡಿ ಶ್ರೀರಾಮ ಭಜನಾ ಮಂದಿರ ಅಧ್ಯಕ್ಷ ರಾಜೇಶ್‌ ಸಾವು

ಬೆಳಗಾವಿ ಜಿಲ್ಲೆ ಚನ್ನಮ್ಮನ ಕಿತ್ತೂರು ತಾಲೂಕಿನ ಅಂಬಡಗಟ್ಟಿಯಲ್ಲಿ ನಿವಾಸಿಗಳಾದ ಮಹಾಬಳೇಶ ಮತ್ತು ಸಿಮ್ರಾನ್ ಇಬ್ಬರೂ ಕಳೆದ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಈ ವೇಳೆ ಇಬ್ಬರ ನಡುವೆ ದೈಹಿಕ ಸಂಬಂಧ ಏರ್ಪಟ್ಟಿದೆ. ಪರಿಣಾಮ ಸಿಮ್ರಾನ್, ಮದುವೆಗೂ ಮುಂಚೆಯೇ ಗರ್ಭಿಣಿಯಾಗಿದ್ದಾಳೆ. ಯುವತಿ 20 ದಿನಗಳ ಹಿಂದೆ ಯುಟ್ಯೂಬ್‌ನಲ್ಲಿ ವಿಡಿಯೋ ನೋಡಿಕೊಂಡು ಸೆಲ್ಫ್ ಡೆಲಿವರಿ ಮಾಡಿಕೊಂಡಿದ್ದಾಳೆ.

ಈ ವೇಳೆ ಆಕೆಗೆ ಹೆಣ್ಣು ಮಗು ಜನಿಸಿದ್ದು, ಅದನ್ನು ಪ್ರಿಯಕರ ಮಹಾಬಳೇಶನ ಕೈಗೆ ನೀಡಿದ್ದಳು. ಆದರೆ, ಆತ ಆ ಹಸುಗೂಸನ್ನು ಹತ್ಯೆ ಮಾಡಿ ತಿಪ್ಪೆಗೆ ಎಸೆದಿದ್ದಾನೆ. ಹಸುಳೆ ಶವವನ್ನು ನಾಯಿಗಳು ಎಳೆದಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಹಸುಗೂಸನ್ನು ಕೊಂದು ತಿಪ್ಪೆಗೆಸೆದ ಪ್ರಕರಣಕ್ಕೆ ಸಂಬಂಧಿದಂತೆ ಪ್ರೇಮಿಗಳಿಬ್ಬರನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *