ಉಜಿರೆ:(ಮಾ.26) ಪರಮಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಮತ್ತು ಕೆ.ಎಂ.ಸಿ ಆಸ್ಪತ್ರೆ ಅತ್ತಾವರ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ

ಇದನ್ನೂ ಓದಿ: 💠ಪದ್ಮುಂಜ : ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರದ ಉದ್ಘಾಟನೆ
ಎಪ್ರಿಲ್ 2 ರಂದು ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳ ಚಿಕಿತ್ಸಾ ಶಿಬಿರವು ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಇಲ್ಲಿ ಹೊರರೋಗಿ ವಿಭಾಗದಲ್ಲಿ ಬೆಳಗ್ಗೆ 9:00ರಿಂದ ಮಧ್ಯಾಹ್ನ 2.30ರ ವರೆಗೆ ನಡೆಯಲಿದೆ.

ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್ ಸಂಧಿವಾತ, ಸ್ಪಾಂಡಿಲೋ ಆರ್ಥ್ರೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್,

ಸ್ಕ್ಲೆರೋಡರ್ಮಾ, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಬಹುದು.
ಶಿಬಿರದಲ್ಲಿ ಉಚಿತ ಸಮಾಲೋಚನೆಯ ಜೊತೆಗೆ ರಕ್ತ ಪರೀಕ್ಷೆಗಳಿಗೆ ಹಾಗೂ ಔಷಧಗಳಿಗೆ ಶೇ. 10 ರಷ್ಟು ರಿಯಾಯಿತಿ ಇದೆ.


ಶಿಬಿರದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರದ ಖ್ಯಾತ ಸಂಧಿವಾತ ತಜ್ಞರಾದ ಡಾ. ಶಿವರಾಜ್ ಪಡಿಯಾರ್ ಮತ್ತು ಡಾ. ಪ್ರತ್ಯೂಷ ಮಣಿಕುಪ್ಪಂ ವೈದ್ಯರುಗಳು ಭಾಗಿಯಾಗಲಿದ್ದಾರೆ.

ಹೆಸರು ನೊಂದಾಯಿಸಿಕೊಳ್ಳಲು 7760397878 , 9972000438 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
