Fri. Apr 4th, 2025

Mangaluru: ಅಕ್ರಮವಾಗಿ ಕಟ್ಟಿಗೆ ಸಾಗಾಟ ಮಾಡುತ್ತಿದ್ದ ವಾಹನ ವಶಕ್ಕೆ ಪಡೆದ ಅಧಿಕಾರಿಗಳು!!!!!!

ಮಂಗಳೂರು:(ಮಾ.27) ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆ ಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ಮಂಗಳೂರು ತಾಲ್ಲೂಕು ಬಡಗ ಉಳಿಪ್ಪಡಿ ಗ್ರಾಮದ ಗಂಜಿಮಠ ಎಂಬಲ್ಲಿ ಕಾರ್ಯಾಚರಣೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ⭕ಮಂಗಳೂರು: ಅಪಘಾತದಲ್ಲಿ ಮೃತಪಟ್ಟ ಮಗ

ಮಂಗಳೂರು ತಾಲೂಕು ಬಡಗ ಉಳಿಪ್ಪಾಡಿ ಗ್ರಾಮದ ಗಂಜಿಮಠ ಎಂಬಲ್ಲಿ ಮೂಡಬಿದ್ರೆ ಕಡೆಯಿಂದ ಕಟ್ಟಿಗೆಯನ್ನು ತುಂಬಿಸಿಕೊಂಡು ಮಂಗಳೂರಿಗೆ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.

ಸೊತ್ತು ಮತ್ತು ವಾಹನದ ಮೌಲ್ಯ 2.5ಲಕ್ಷ ಆಗಿದ್ದು, ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಕುಮಾರ್ ಸ್ವಾಮಿ ,

ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಅಶ್ವಿಥ್ ಗಟ್ಟಿ, ವಿನಯ ಕುಮಾರ್, ಶಿವಾನಂದ ಮಾಧರ, ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿದ್ದಾರೆ.


ಆರೋಪಿ ವಾಹನ ಚಾಲಕ ಹಮೀದ್ ವಾಲ್ಪಾಡಿ ಇವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

Leave a Reply

Your email address will not be published. Required fields are marked *