ಬೆಳ್ತಂಗಡಿ:(ಮಾ.28) ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಾಲಿನಲ್ಲಿ ನಡೆದಿದೆ. ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ⭕ಉಡುಪಿ: ವಿದ್ಯಾರ್ಥಿನಿಯನ್ನು ಅಪಹರಿಸಿ ಮದ್ವೆಯಾಗಲು ಯತ್ನಿಸಿದ ಮುಸ್ಲಿಂ ಯುವಕ
ಮನೆಯಲ್ಲಿ ಯಾರು ಇಲ್ಲದ ವೇಳೆ ನೀರು ಕೇಳುವ ನೆಪದಲ್ಲಿ ಬಂದ ಶಂಕರ ಗೌಡ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.ಈ ವೇಳೆ ಆತನ ಕೈಗೆ ಕಚ್ಚಿ ಯುವತಿ ತಪ್ಪಿಸಿಕೊಂಡು ಹತ್ತಿರದ ಚಿಕ್ಕಪ್ಪನ ಮನೆಗೆ ಓಡಿ ಬಂದು ವಿಷಯ ತಿಳಿಸಿದ್ದಾಳೆ ಕೂಡಲೇ ಅಲ್ಲಿಗೆ ಬಂದು ನೋಡಿದಾಗ ಆತ ಪರಾರಿಯಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ.




ಆರೋಪಿಯನ್ನು ಮಾ.27 ರಂದು ಧರ್ಮಸ್ಥಳ ಪೋಲಿಸರು ಬಂಧಿಸಿ ಮಂಗಳೂರು ಫೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು , ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.
