ಬೆಳ್ತಂಗಡಿ:(ಮಾ.28) ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಶ್ರೀ ಬ್ರಿಜೇಶ್ ಚೌಟ ಅವರೊಂದಿಗೆ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾದ “ಪ್ರಸಾದ್”ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಬೆಳ್ತಂಗಡಿ ತಾಲ್ಲೂಕಿನ ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ,

ಇದನ್ನೂ ಓದಿ: ⭕Shruthi Narayanan: ಶೃತಿ ನಾರಾಯಣನ್ ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್
ಬೆಳ್ತಂಗಡಿ ತಾಲ್ಲೂಕಿನ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬೆಳ್ತಂಗಡಿ ತಾಲ್ಲೂಕಿನ ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲ, ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿ ಹಾಗೂ ಶ್ರೀ ತೋಡಿಕ್ಕಾನ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗೆ ಪ್ರಸಾದ್ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ದೇವಸ್ಥಾನಗಳಿಗೆ ಅನುದಾನ ಒದಗಿಸಿ ದೇವಸ್ಥಾನದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ದೇವಾಲಯಗಳಾದ ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರೊಂದಿಗೆ ಶಾಸಕರಾದ ಶ್ರೀ ಹರೀಶ್ ಪೂಂಜ ಭೇಟಿ ಮಾಡಿ ಮನವಿ ಮಾಡಿದರು.



- ರಾ.ಹೆ 75 ಮತ್ತು ರಾ.ಹೆ 275ರ ಪೆರಿಯಶಾಂತಿ – ಪೈಚೂರು ಸಂಪರ್ಕ ರಸ್ತೆ
- ರಾ.ಹೆ 73 ಮತ್ತು ರಾ.ಹೆ 169ರ ಗುರುವಾಯನಕೆರೆ – ಬಜಗೋಳಿ ಸಂಪರ್ಕ ರಸ್ತೆ
