ಕುಂದಾಪುರ:(ಮಾ.29) ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಸ್ರೂರು ಸಮೀಪದ ಬಳ್ಕೂರು ಬಿ.ಹೆಚ್. ಶಾಲೆ ಬಳಿ ನಡೆದಿದೆ.

ಇದನ್ನೂ ಓದಿ: ⭕ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ
ಸಾವನ್ನಪ್ಪಿದ ಸ್ಕೂಟರ್ ಸವಾರರನ್ನು ಬಳ್ಕೂರಿನ ರಾಜೀವ ಶೆಟ್ಟಿ(50) ಹಾಗೂ ಸುಧೀರ್ ದೇವಾಡಿಗ(35) ಎಂದು ತಿಳಿದು ಬಂದಿದೆ.
ಅಭಿಷೇಕ್ ಶೆಟ್ಟಿ ಎನ್ನುವ ವ್ಯಕ್ತಿ ಮಾರುತಿ ಸಿಫ್ಟ್ ಕಾರನ್ನು ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸ್ಕೂಟರ್ ಗೆ ನೇರ ಡಿಕ್ಕಿ ಹೊಡೆದಿದ್ದಾನೆ.



ಡಿಕ್ಕಿ ರಭಸಕ್ಕೆ ಸ್ಕೂಟರ್ ಸವಾರರು ಗಂಭೀರ ಗಾಯಗೊಂಡು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸಿದ್ದಾರೆ.
