Thu. Apr 3rd, 2025

Udupi: ಶಾಲಾ ವಾಹನಕ್ಕೆ ಕಾರು ಡಿಕ್ಕಿ – ಕಾರಿನಲ್ಲಿದ್ದ ತಂದೆ ಮಗನಿಗೆ ಗಾಯ

ಉಡುಪಿ:(ಮಾ.29) ಶಾಲಾ ವಾಹನಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಕುಂಟಲ್ ನಗರ ಸಮೀಪ ನಡೆದಿದೆ.

ಇದನ್ನೂ ಓದಿ: ⭕ಉಡುಪಿ: ಕ್ರಿಶ್ಚಿಯನ್‌ ಯುವತಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ ಬರುವ ಸಂದರ್ಭ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ತಂದೆ ಮಗನಿಗೆ ಗಾಯಗಳಾಗಿವೆ.

ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು, ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ, ವಾಹನಗಳನ್ನು ತೆರವುಗೊಳಿಸಿದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *