ಪುತ್ತೂರು :(ಮಾ.31) ಬಂಟ್ವಾಳ ತಾಲೂಕಿನ ವಿಟ್ಲದ ಮುರುವ ಎಂಬಲ್ಲಿ ದಲಿತ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ಆರೋಪಿಯನ್ನು ತಕ್ಷಣ ಬಂಧಿಸಿ, ಆರೋಪಿಯ ಹಿಂದೆ ಯಾರೆಲ್ಲಾ ಇದ್ದಾರೆ ಎಂದು ಸೂಕ್ತ ತನಿಖೆ ನಡೆಸಿ ಆರೋಪಿಯನ್ನು ವಿಚಾರಗೊಳಪಡಿಸಬೇಕು. ಒಟ್ಟು ಘಟನೆ ಸತ್ಯಾಸತ್ಯತೆ ಬಯಲಾಗಬೇಕು. ಇಲ್ಲಿದಿದ್ದಲ್ಲಿ ಏಪ್ರಿಲ್ ಮೊದಲ ವಾರದಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಲಿದ್ದೇವೆ ದಲಿತ ಹಕ್ಕು ಸಮಿತಿಯ ರಾಜ್ಯ ಸಮಿತಿ ಸದಸ್ಯೆ ಈಶ್ವರಿ ಶಂಕರ್ ಮತ್ತು ಡಿವೈಎಫ್ಐ ದ.ಕ.ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: 🛑ಸುಳ್ಯ: ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದ ಕಾರು!!
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರಬಲ ರಾಜಕೀಯ ಹಿನ್ನಲೆಯುಳ್ಳ ಮಹೇಶ್ ಎಂಬಾತ ಲೈಂಗಿಕ ಕಿರುಕುಳ ನೀಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದೆ. ಇದೀಗ ಬಾಲಕಿ ಖಿನ್ನತೆಗೊಳಗಾಗಿದ್ದು, ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಬೇಕು ಎಂದು ದಲಿತ ಹಕ್ಕು ಸಮಿತಿ ಆಗ್ರಹಿಸುತ್ತದೆ ಎಂದು ಅವರು ತಿಳಿಸಿದರು.

ರಾಜಕೀಯವಾಗಿ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಭೂಮಾಲಕ ಮಹೇಶ್ ದಲಿತ ಅಪ್ರಾಪ್ತ ವಿದ್ಯಾರ್ಥಿನಿಗೆ ಆಮಿಷ ಒಡ್ಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಈ ಬಗ್ಗೆ ಯಾರಲ್ಲೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದ. ಈ ಕುರಿತು ವಿಚಾರಿಸಲು ಶಾಲಾ ಶಿಕ್ಷಕರು ಆಕೆಯ ಮನೆಗೆ ತೆರಳಿದ್ದ ವೇಳೆ, ಆಕೆಯ ಮನೆಯವರು ಆಕೆಗೆ ಆರೋಗ್ಯ ಸರಿಯಿಲ್ಲ ಎಂದು ಆಕೆಯನ್ನು ಮಾತನಾಡಿಸಲು ಬಿಡಲಿಲ್ಲ ಎನ್ನಲಾಗಿದೆ.

ಇದು ಹಲವು ಅನುಮಾನಗಳೀಗೆ ಎಡೆ ಮಾಡಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಮಾ.24 ರಂದು ಆರೋಪಿ ಮೇಲೆ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ಕೇಸು ದಾಖಲಾಗಿದೆ ಎಂದು ತಿಳಿಸಿದ ಅವರು, ಅಂದು ಸಮಿತಿಯವರು ಸ್ಥಳೀಯ ಮುಖಂಡರ ಆಕೆಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದು, ಅತ್ಯಾಚಾರ ನಡೆದಿರುವ ಕುರಿತು ಬಲವಾದ ಶಂಕೆ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಆರೋಪಿ ಮಹೇಶ್ ಬೆದರಿಕೆಗೆ ಹೆದರಿ ಹೆತ್ತವರು ಸತ್ಯವನ್ನು ಮುಚ್ಚಿಡುವ ಸಾಧ್ಯತೆ ಹೆಚ್ಚಾಗಿದ್ದು, ಈ ಕುರಿತು ಪೊಲೀಸರು ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಕೊಡಾಜೆ, ಕಾರ್ಯದರ್ಶಿ ಕೃಷ್ಣ ತಣ್ಣೀರುಬಾವಿ, ಮುರುವ ಸಮಿತಿ ಕಾರ್ಯದರ್ಶಿ ಪುಷ್ಪರಾಜ್ ವಉಪಸ್ಥಿತರಿದ್ದರು.
