Thu. Apr 3rd, 2025

Sullia: ನಿಯಂತ್ರಣ ತಪ್ಪಿ ಮನೆಯ ಮಹಡಿಯ ಮೇಲೆ ಬಿದ್ದ ಕಾರು!!

ಸುಳ್ಯ:(ಮಾ.31) ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂ ಗೊಂಡ ಘಟನೆ ನಡೆದಿದೆ.

ಇದನ್ನೂ ಓದಿ: 🔴ಮುಂಡಾಜೆ: ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ಮುಂಡಾಜೆಯಲ್ಲಿ ಈದುಲ್ ಫಿತರ್ ಸಂಭ್ರಮ

ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಯವರ ಸೊಸೆ ಅವರ ಮಾವನ ಕಾರನ್ನು ಚಲಾಯಿಸಿಕೊಂಡು ಗುತ್ತಿಗಾರು ಕಡೆಗೆ ಹೊರಟಿದ್ದರು.

ಚಿರೆಕಲ್ ನ ಮನೆಯಿಂದ ಮುಖ್ಯರಸ್ತೆಗೆ ಬಂದು ಸ್ವಲ್ಪ ಮುಂದಕ್ಕೆ ಹೋದಾಗ ಕಾರಿಗೆ ಬ್ರೇಕ್ ಹಾಕಿದಾಗ ಬ್ರೇಕ್ ನ ಅಡಿಗೆ ನೀರಿನ ಬಾಟಲ್ ಸಿಲುಕಿ ಬ್ರೇಕ್ ಸಿಗದ ಕಾರಣ ನಿಯಂತ್ರಣ ತಪ್ಪಿ ರಸ್ತೆಯ ಕೆಳಭಾಗದಲ್ಲಿದ್ದ ಸೀತಮ್ಮ ಚಿರೆಕಲ್ಲು ಎಂಬವರ ಮನೆಯ ಮಹಡಿಯ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *