ಬೆಳ್ತಂಗಡಿ:(ಎ.1) ಹಳೆ ವಿದ್ಯಾರ್ಥಿ ಸಂಘ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾೈಲ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.) ಉಜಿರೆ, ಕ್ಯಾನ್ ಫಿನ್ ಹೋಮ್ಸ್ ಸಂಸ್ಥೆ ಬೆಂಗಳೂರು, ರೋಟರಿ ಇಂದಿರಾ ನಗರ ಬೆಂಗಳೂರು,

ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಬೆಳ್ತಂಗಡಿ ಪತ್ರಕರ್ತರ ಸಂಘ(ರಿ) ಬೆಳ್ತಂಗಡಿ ಇದರ ಸಹಕಾರದೊಂದಿಗೆ ಸ್ನೇಹ ಸಮ್ಮಿಲನ ಮತ್ತು ನವೀಕರಣಗೊಂಡ ಶಾಲೆಯ ಹಸ್ತಾಂತರ ಕಾರ್ಯಕ್ರಮವು ಎಪ್ರಿಲ್.6 ರಂದು ದ.ಕ.ಜಿ.ಪಂ.ಉ.ಹಿ.ಪ್ರಾ. ಶಾಲೆ ಕರ್ನೋಡಿಯಲ್ಲಿ ನಡೆಯಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಬಿ.ಕೆ.ಧನಂಜಯ ರಾವ್ ರವರು ತಿಳಿಸಿದರು.
ಕರ್ನೋಡಿ ಶಾಲೆ 60 ವರ್ಷಕ್ಕಿಂತಲೂ ಹೆಚ್ಚು ಇತಿಹಾಸ ಹೊಂದಿದೆ. ಸರ್ಕಾರಿ ಶಾಲೆಯಾದ್ದರಿಂದ ಮೂಲಭೂತ ಸೌಕರ್ಯಗಳು ಕಡಿಮೆ ಆಗುತ್ತಾ ಹೋಯಿತು. 300 ವಿದ್ಯಾರ್ಥಿಗಳಿದ್ದ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಾ ಬಂತು. ಇದೀಗ ಈ ಶಾಲೆಯಲ್ಲಿ 93 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಾ ಇದ್ದಾರೆ ಎಂದು ಬಿ.ಕೆ.ಧನಂಜಯ ರಾವ್ ರವರು ಹೇಳಿದರು.




ಈ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್, ಬದುಕು ಕಟ್ಟೋಣ ಬನ್ನಿ ತಂಡದ ಅಧ್ಯಕ್ಷರಾದ ಬಿ.ಕೆ. ಧನಂಜಯ ರಾವ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗಣೇಶ್, ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸೌಮ್ಯ, ಶಾಲಾ ಮುಖ್ಯೋಪಾಧ್ಯಯರಾದ ಜಗನ್ನಾಥ್ ರವರು ಉಪಸ್ಥಿತರಿದ್ದರು.
