ಬೆಳ್ತಂಗಡಿ(ಏ.1): ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 4 ದಿನದ ಬೇಸಿಗೆ ಶಿಬಿರ ಹಾಗೂ ಕ್ರೀಡಾ ಶಿಬಿರದ ಉದ್ಘಾಟನೆ ಏ.1ರಂದು ನಡೆಯಿತು.

ಇದನ್ನೂ ಓದಿ: ⭕Tirumala: ತಿರುಮಲದಲ್ಲಿ ಒಳಗೆ ನುಗ್ಗಿ ಮುಸ್ಲಿಂ ವ್ಯಕ್ತಿಯ ರಂಪಾಟ
ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ರೇಶ್ಮಾ ರಜತ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಧ್ಯಾನ ಹಾಗೂ ಯೋಗದ ಮಹತ್ವವನ್ನು ತಿಳಿಸಿ, ಒತ್ತಡ ನಿಯಂತ್ರಣದ ಬಗ್ಗೆ ತರಬೇತಿ ನೀಡಿದರು.


ಈ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಯೋಗ, ಕ್ರೀಡೆ ಹಾಗೂ ಕರಕುಶಲ ವಸ್ತುಗಳ ತಯಾರಿಕೆ ಮುಂತಾದ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಎಂ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಸಹಕರಿಸಿದರು.


