ಪುತ್ತೂರು:(ಎ.1) ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕೈ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಲೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು.
ಕಾರಿನ ಚಾಲಕ ಹಾಗೂ ಮತ್ತೊಬ್ಬನಲ್ಲಿ ಈ ಬಗ್ಗೆ ವಿಚಾರಿಸಿದಾಗ ತಡವರಿಸಿಕೊಂಡು ಉತ್ತರಿಸಿದ್ದು ಪ್ರಶ್ನಿಸಿದಾಗ, ತಮ್ಮ ಬಳಿ ಎಂಡಿಎಂಎ ವಸ್ತು ಇರುವುದಾಗಿಯೂ, ಇದನ್ನು ಮಾರಾಟ ಮಾಡಲು ತೆರಳುತ್ತಿರುವುದಾಗಿ ಒಪ್ಪಿಕೊಂಡಿದ್ದರು.



ನಿಷೇಧಿತ ವಸ್ತುವಾದ ಎಂಡಿಎಂಎಯನ್ನು ತಮ್ಮ ವಶದಲ್ಲಿಟ್ಟುಕೊಂಡು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿಗಳಾದ ಇಸುಬು ಫೈಝಲ್ (30ವ.) ಮತ್ತು ತಸ್ಲಿಪ್ (26ವ.)ಎಂಬೀರ್ವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

