Thu. Apr 3rd, 2025

Puttur: ಹೋಟೆಲ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ

ಪುತ್ತೂರು:(ಎ.2) ಚಿನ್ನು ಹೋಟೆಲ್ ಮಾಲೀಕ ಮೋಹನ್ ಆತ್ಮಹತ್ಯೆಗೆ ಶರಣಾದ ಘಟನೆ ಕಲ್ಲರ್ಪೆಯಲ್ಲಿ ನಡೆದಿದೆ.

ಇದನ್ನೂ ಓದಿ: 🔴ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರಮದಾನ

ಸಾಲಬಾಧೆಯಿಂದ ಹೋಟೆಲ್ ಮಾಲೀಕ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಮೋಹನ್ ಅವರು ಎರಡು ವಾರಗಳಿಂದ ಹೋಟೆಲ್ ಬಂದ್ ಮಾಡಿದ್ದರು.

ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ನೆರೆಯ ಮನೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ತೆರಳಿದ್ದ ಮನೆಯವರು ಸಂಜೆ ವಾಪಸಾದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.


ಮೋಹನ್ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ‘ಸಾಲಬಾಧೆಯೇ ನನ್ನ ಸಾವಿಗೆ ಕಾರಣ’ ಎಂದು ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಪತ್ನಿ ನೀಡಿದ ದೂರಿನಂತೆ ಸಂಪ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *