ಬೆಳ್ತಂಗಡಿ:(ಎ. 5) ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಬೆಳ್ತಂಗಡಿ ಸ್ಥಳೀಯ ಸಂಸ್ಥೆ ಕಬ್ಸ್ – ಬುಲ್ ಬುಲ್ ಉತ್ಸವ, ಸ್ಕೌಟ್ಸ್ – ಗೈಡ್ಸ್ ಮೇಳ , ರೋವರ್ಸ್ – ರೇಂಜರ್ಸ್ ಸಮಾಗಮ 2024-25 ಎಪ್ರಿಲ್. 5 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಇದನ್ನೂ ಓದಿ: ಬಂಟ್ವಾಳ: ದ್ವಿಚಕ್ರ ಸವಾರನ ಮೇಲೆ ರಿಕ್ಷಾ ಚಾಲಕ ಹಲ್ಲೆ
ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ವಹಿಸಿದ್ದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪ್ ಸಿಂಹ ನಾಯಕ್ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸೌಟ್ ಆಯುಕ್ತ ಬಿ.ಎಂ ತುಂಬೆ, ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರು ಶ್ರೀಮತಿ ಹೇಮಲತಾ ಎಂ. ಆರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಗೈಡ್ ಆಯುಕ್ತರು ಶ್ರೀಮತಿ ವಿಮಲಾ ರಂಗಯ್ಯ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್‌ರಾಜ್ ಕೆ., ರೋವರ್ಸ್ ಲೀಡರ್ ಡಾ| ರವಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯದರ್ಶಿ ಪ್ರಮೀಳಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೋಶಾಧಿಕಾರಿ ಬೆಳ್ಳಿಯಪ್ಪ ಕೆ., ಹಾಗೂ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.
ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಎಚ್. ಪದ್ಮಕುಮಾರ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ರೋವರ್ಸ್ ಗೈಡ್ ಲೀಡರ್ ಲಕ್ಷ್ಮೀಶ ಕಾರ್ಯಕ್ರಮವನ್ನು ನಿರೂಪಿಸಿದರು.


