ಕನ್ಯಾಡಿ(ಏ.05): ಮಂಗಳೂರು CR 3 (India) private limited ನ ಸೀನಿಯರ್ ಎಚ್ ಆರ್ ಎಕ್ಸಿಕ್ಯೂಟಿವ್ ಶ್ರೀ ಗಣೇಶ ಟಿ ಸೇವಾನಿಕೇತನಕ್ಕೆ ಭೇಟಿ ನೀಡಿ,

ಇದನ್ನೂ ಓದಿ: ಉಜಿರೆ: ಎಸ್.ಡಿ.ಎಂ. ಪತ್ರಿಕೋದ್ಯಮ ವಿದ್ಯಾರ್ಥಿಗಳ ಕಿರುಚಿತ್ರಕ್ಕೆ ರಾಷ್ಟ್ರ ಮಟ್ಟದ ಮನ್ನಣೆ
ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಕಂಪೆನಿಯಿಂದ ರೂ. 5,00,000/- ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು.



ಸೇವಾಧಾಮ ಸಂಸ್ಥೆಯ ಸಂಚಾಲಕರಾದ ಶ್ರೀ ಕೆ. ಪುರಂದರ ರಾವ್ ಮತ್ತು ಸೇವಾಭಾರತಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಸ್ವರ್ಣಗೌರಿ ಇದನ್ನು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

