Mon. Apr 7th, 2025

Belthangady: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ – ಆರೋಪಿ ಶಾಫಿ ಬೆಳ್ಳಾರೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು!

ಬೆಳ್ತಂಗಡಿ:(ಎ.7) ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆಯನ್ನು ಎ.7 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 🔴ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್‌ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಪಡಿಸಲಾಗಿದೆ. 2017 ರಲ್ಲಿ ಆರ್‌.ಎಸ್.ಎಸ್‌ ಹಾಗೂ ಕಲ್ಲಡ್ಕ ಭಟ್‌ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರು ಮಾಡಲಾಗಿದೆ.

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿ ಸಾಫಿ ಬೆಳ್ಳಾರೆಯನ್ನು ಎರಡು ವರ್ಷದ ಹಿಂದೆ ಎನ್‌ಐಎ ಬಂಧನ ಮಾಡಿ ನ್ಯಾಯಾಂಗ ಬಂಧನದಲ್ಲಿಟ್ಟಿದೆ. ಕೋರ್ಟ್‌ಗೆ ಹಾಜರುಪಡಿಸಿ ಆರೋಪಿ ಶಾಫಿಯನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಗಿದೆ.

Leave a Reply

Your email address will not be published. Required fields are marked *