ಬೆಳ್ತಂಗಡಿ: (ಎ.11) ಬೆಳ್ತಂಗಡಿ ತಾಲೂಕು ನೆರಿಯ ಗ್ರಾಮದ ಬಾಂಜಾರಿನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮವು ಎ.11 ರಂದು ನಡೆಯಿತು.

ಶಿಲಾನ್ಯಾಸವನ್ನು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರು, ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕರಾದ ಕೆ. ಮೋಹನ್ ಕುಮಾರ್ ರವರು ನೆರವೇರಿಸಿದರು.
ಶಿಲಾನ್ಯಾಸ ನೆರವೇರಿದ ಬಳಿಕ ಸಭಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೋಹನ್ ಕುಮಾರ್ ರವರು ಗ್ರಾಮೀಣ ಪ್ರದೇಶದಲ್ಲಿ, ಪ್ರಶಾಂತವಾದ ವಾತಾವರಣದಲ್ಲಿರುವ ಇಂತಹ ಶ್ರದ್ಧಾ ಕೇಂದ್ರಗಳ ರಕ್ಷಣೆ ಮತ್ತು ಅಭಿವೃದ್ಧಿಯನ್ನು ನಾವುಗಳು ಮಾಡಿದಾಗ ಅದರ ಫಲ ಖಂಡಿತಾ ನಮಗೆ ಸಿಗುತ್ತದೆ. ನಾವೆಲ್ಲರೂ ಪ್ರಕೃತಿ ಆರಾಧಕರೂ. ಪ್ರಕೃತಿಯಲ್ಲಿ ದೇವರನ್ನು ಕಂಡವರು ಎಂದರು..
.


ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರು ಮತ್ತು ಸರ್ವಸದಸ್ಯರು ಹಾಗೂ ಊರಿನವರು ಉಪಸ್ಥಿತರಿದ್ದರು.


