ಉಜಿರೆ:(ಎ.11) ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿವಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ಉತ್ತಮ ಅಂಕಗಳನ್ನು ಗಳಿಸಿ ರಾಜ್ಯಕ್ಕೆ ನಾಲ್ಕು ಸ್ಥಾನಗಳನ್ನು ಪಡೆಯುವಲ್ಲಿ ತುಷಾರ ಬಿಎಸ್, ಆರ್ಯ ದಿನೇಶ್, ನೀತಿ, ಶ್ರೇಯಾ ಹೆಚ್.ಎ ಯಶಸ್ವಿಯಾಗಿದ್ದಾರೆ.

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು, ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆಯವರು, ಡಿ.ಹರ್ಷೇಂದ್ರ ಕುಮಾರ್,ಕಾರ್ಯದರ್ಶಿ ಡಾ.ಸತೀಶ್ಚಂದ್ರ ಹಾಗೂ ಕಾಲೇಜಿನ ಪ್ರಾಂಶುಪಾಲರು,ಉಪನ್ಯಾಸಕ ವೃಂದ,ಎಲ್ಲಾ ಸಿಬ್ಬಂದಿಗಳಿಗೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ.ಮೋಹನ್ ಕುಮಾರ್ ಅಭಿನಂದನೆಯನ್ನು ಸಲ್ಲಿಸಿದ್ದಾರೆ.



ಈ ಸಂದರ್ಭದಲ್ಲಿ ಉಜಿರೆ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರನ್ನು ಹೂಗುಚ್ಛ ನೀಡಿ ಅಭಿನಂದಿಸಿದರು.

