ಬೆಳ್ತಂಗಡಿ :(ಎ.14) ಬೈಕ್ ಮತ್ತು ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಎ.14 ರಂದು ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ನಡೆದಿದೆ.

ಇದನ್ನೂ ಓದಿ: 🛑ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ವ್ಯಕ್ತಿ ಬೈಕ್ ಸವಾರ ಉಪೇಂದ್ರ (35 ವ) ಶಿವಮೊಗ್ಗ ಜಿಲ್ಲೆಯವರಾಗಿದ್ದು ಕಾಲೇಜಿನ ಹಾಸ್ಟೆಲ್ ನಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ. ಸಹಸವಾರ ಮೋಹನ್ ಅವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



