ಗಂಡಿಬಾಗಿಲು:(ಎ.14) ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು, ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 134ನೇ ಜಯಂತಿಯನ್ನು ಎ.14 ರಂದು ಸರಳವಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ನೆರವೇರಿಸಿದರು.
ಸಂಸ್ಥೆಯ ಆಡಳಿತ ನಿರ್ದೇಶಕರಾದ ಶ್ರೀಯುತ ಡಾ.ಯು.ಸಿ.ಪೌಲೋಸ್ ರವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನ ರಚಿಸಿದ ಬಗ್ಗೆ, ಅವರ ಆದರ್ಶಗಳು ಮತ್ತು ತತ್ವಗಳನ್ನು ನಮ್ಮ ಜೀವನದಲ್ಲಿ ಯಾವ ರೀತಿ ಅಳವಡಿಸಿಕೊಳ್ಳಬೇಕೆಂಬುದರ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು.




ನ್ಯೂ ಸಿಟಿ ನರ್ಸಿಂಗ್ ಕಾಲೇಜು ಉಡುಪಿಯ ವಿದ್ಯಾರ್ಥಿಗಳು, ಸಂಸ್ಠೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.
