ಪುತ್ತೂರು:(ಎ.14) ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ದೇವರಕೊಲ್ಲಿ ಬಳಿ ನಡೆದಿದೆ. ಕಾರು ಪಲ್ಟಿಯಾಗಿದ್ದನ್ನು ಎತ್ತಿ ಸರಿಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಕಂಡುಬಂದಿದೆ.

ಇದನ್ನೂ ಓದಿ: ⭕ಬೆಳ್ತಂಗಡಿ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ
ಏ.12 ರಂದು ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಯಿತು.

ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿದ್ದು ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದಾಗ ಕಾರಿನಲ್ಲಿದ್ದವರು ಪುತ್ತೂರು ನಿವಾಸಿಗಳಾಗಿದ್ದು ಅವರ ಹೆಸರುಗಳು ಫಜ್ಜುದ್ದೀನ್, ಮುಷ್ಕಾಕ್, ಜಾಬಿರ್ ಎಂದು ತಿಳಿದು ಬಂದಿದೆ. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದು ಅಲ್ಲದೆ ಕಾರಿನಲ್ಲಿದ್ದ ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.


