Sat. Apr 19th, 2025

Belthangady: ಕಜಕೆ ಸ.ಹಿ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

ಬೆಳ್ತಂಗಡಿ:(ಎ.16) ಬೆಸ್ಟ್ ಫೌಂಡೇಶನ್ ವತಿಯಿಂದ ಮಲವಂತಿಗೆ ಗ್ರಾಮದ ಕಜಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪೀಠೋಪಕರಣವನ್ನು ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷರಾದ ರಕ್ಷಿತ್ ಶಿವರಾಂ ಹಸ್ತಾಂತರ ಮಾಡಿದರು.

ಇದನ್ನೂ ಓದಿ: ⭕ಸುರತ್ಕಲ್ : ಬೀಚ್ ನಲ್ಲಿ ನೀರು ಪಾಲಾದ ಇಬ್ಬರು ಯುವಕರು

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಆರೋಗ್ಯ ರಕ್ಷಾ ಸಮಿತಿ ಸದಸ್ಯರು, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಜಯರಾಮ್. ಎಂ ಕೆ,

ಮಿತ್ತಬಾಗಿಲು ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಮಹಮ್ಮದ್, ಬಂಗಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಲಕ್ಷ್ಮಣ ಗೌಡ, ಬೆಳ್ತಂಗಡಿ ವಿಧಾನ ಸಭೆ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಮ್ ಕೊಕ್ಕಡ,

ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಗ್ರಾಮೀಣ ಅಧ್ಯಕ್ಷರ ಪಿ ಟಿ ಸೆಬಾಸ್ಟಿಯನ್, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗುರುರಾಜ್ ಪೂಜಾರಿ ಕಿಲ್ಲೂರು, ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷರು ಅಝರ್, ಯುವ ಕಾಂಗ್ರೆಸ್ ಗ್ರಾಮೀಣ ಉಪಾಧ್ಯಕ್ಷರು ಸಮದ್ ಇಂದಬೆಟ್ಟು, ಸ್ಥಳೀಯರಾದ ವಸಂತ ಗೌಡ ದಿಡುಪೆ, ವೀರೇಶ್ವರ ಮರಾಠೆ ಜಗದೀಶ್ ಭಟ್, ಶಾಲಾ ಮುಖ್ಯೋಪಾಧ್ಯಾಯರಾದ ಕುಮಾರ್ ಸ್ವಾಮಿ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *