ಕಾರ್ಕಳ:(ಎ.16) ಬಸ್ ಮತ್ತು ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕಾರ್ಕಳ ರಸ್ತೆಯ ಕೊಟ್ನಕಟ್ಟೆಯ ಸಮೀಪ ನಡೆದಿದೆ.


ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.


ಬಸ್ ಉಡುಪಿಯಿಂದ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿತ್ತು.ಪಿಕಪ್ ಕಾರ್ಕಳದ ಕಡೆಯಿಂದ ಬರುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.



