ಬಂಟ್ವಾಳ:(ಎ.17)ಅಮಲು ಪದಾರ್ಥ ಸೇವಿಸಿ ಬಸ್ ಚಲಾಯಿಸಿದ ಚಾಲಕನಿಂದ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ಮುಂಜಾನೆ ವೇಳೆ ಸಂಭವಿಸಿದೆ.

ಇದನ್ನೂ ಓದಿ: ⭕ಉಳ್ಳಾಲ: ಯುವತಿ ಮೇಲೆ ಗ್ಯಾಂಗ್ ರೇಪ್?!
ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕ ದಿಲೀಪ್ ಅಪಘಾತವೆಸಗಿದ ಆರೋಪಿಯಾಗಿದ್ದು, ಗಾಯಗೊಂಡ ಬೈಕ್ ಸವಾರರನ್ನು ಮಹಮ್ಮದ್ ಸುನೈಫ್, ಮಹಮ್ಮದ್ ನಿಜಾಮುದ್ದೀನ್ ಎಂದು ತಿಳಿಯಲಾಗಿದೆ.

ವಿಪರೀತ ಅಮಲು ಪದಾರ್ಥ ಸೇವಿಸಿ, ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಚಾಲಕ ದಿಲೀಪ್ ಅವರು ತುಂಬೆಯಲ್ಲಿ ಮಂಗಳೂರು ಕಡೆಯಿಂದ ಬಿ.ಸಿರೋಡು ಕಡೆಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಸವಾರರಿಬ್ಬರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ.

ಢಿಕ್ಕಿಯಾದ ರಭಸಕ್ಕೆ ಬೈಕ್ ಸವಾರಿಬ್ಬರು ಕೆಳಗೆ ಬಿದ್ದು ದೇಹದ ಅಲ್ಲಲ್ಲಿ ಗಾಯಗಳಾಗಿವೆ. ಕೂಡಲೇ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಸ್ ಚಾಲಕನ ವರ್ತನೆ ಬಗ್ಗೆ ಸಂಶಯಗೊಂಡ ಟ್ರಾಫಿಕ್ ಪೊಲೀಸರು ಇಲಾಖೆಯ ನಿರ್ದೇಶನದಂತೆ ಪರೀಕ್ಷೆ ನಡೆಸಿದಾಗ ಆತ ವಿಪರೀತ ಅಮಲು ಪದಾರ್ಥ ಸೇವನೆ ಮಾಡಿರುವುದು ಧೃಡಗೊಂಡಿದೆ.

ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
