Sat. Apr 19th, 2025

Subrahmanya: ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸುತ್ತಿದ್ದಾತ ಅರೆಸ್ಟ್

ಸುಬ್ರಹ್ಮಣ್ಯ:(ಎ.17) ಕಾಡು ಹಂದಿಯ ಮಾಂಸ ನೀಡುವುದಾಗಿ ಹಲವಾರು ಸಮಯಗಳಿಂದ ಹಲವರಿಂದ ಹಣ ಪಡೆದು ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.15 ರಂದು ಕುಲ್ಕುಂದದಲ್ಲಿ ನಡೆದಿದೆ.

ಇದನ್ನೂ ಓದಿ: ⭕ಕಡಬ: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ವೇದಿಕೆಗೆ ನುಗ್ಗಿ ಅರ್ಥಧಾರಿಯ ಮೈಮೇಲೆ ಎರಗಿದ ವ್ಯಕ್ತಿ!!!

ಮಧ್ಯಾಹ್ನದ ವೇಳೆ ಕುಲ್ಕುಂದದಲ್ಲಿ ಬಸ್ಸಿಗೆ ಕಾಯುತ್ತಿದ್ದ ಮಹಿಳೆಯೊಬ್ಬರಿಗೆ ಕಾಡು ಹಂದಿ ಉರುಳಿಗೆ ಬಿದ್ದಿದ್ದು ಮಾಂಸ ಬೇಕಾದರೆ ಹೇಳಿ ಎಂದು ಈತ ಹೇಳಿದ್ದ. ಮಹಿಳೆಯು ನಿರಾಕರಿಸಿ ಅಲ್ಲಿನ ಸ್ಥಳೀಯರಿಗೆ ಮಾಹಿತಿ ನೀಡಿದ್ದರು. ಈ ಸಂದರ್ಭ ಈ ಹಿಂದೆ ಹಣ ನೀಡಿ ಈತನಿಂದಲೇ ಮೋಸ ಹೋದ ವ್ಯಕ್ತಿಯೊಬ್ಬರು ಈತನನ್ನು ಪ್ರಶ್ನಿಸಿದ್ದಾರೆ.ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಪೊಲೀಸರ ವಿಚಾರಣೆ ಈತ ಕಡಬ ತಾಲೂಕಿನ ಮರ್ದಾಳದ ಮಹೇಶ ಎನ್ನುವ ವ್ಯಕ್ತಿ ಎಂದು ತಿಳಿದು ಬಂದಿದ್ದು ಹಲವರಿಗೆ ವಿವಿಧ ರೀತಿಯಲ್ಲಿ ವಂಚಿಸಿರುವುದು ತಿಳಿದು ಬಂದಿದೆ. ದೂರು ನೀಡಲು ಯಾರು ಮುಂದೆ ಬಾರದ ಕಾರಣ ಆತನನ್ನು ವಿಚಾರಿಸಿ ಪೊಲೀಸರು ಬಿಟ್ಟಿರುವುದಾಗಿ ತಿಳಿದುಬಂದಿದೆ.


ಈತ ಫೆಬ್ರವರಿ ತಿಂಗಳಲ್ಲಿ ಕೆಡ್ಡಸದ ಸಂದರ್ಭ ಎಡಮಂಗಲದಲ್ಲಿ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಬೈಕ್ ನಲ್ಲಿ ಬಂದು “ಹಂದಿ ಮಾಂಸ ಇದೆ, ಬೇಕಾದರೆ ಕೊಡುತ್ತೇನೆ ಎಂದು ಹೇಳಿ ಹಲವರಿಂದ ಹಣ ಪಡೆದು ಹಿರಿಯ ವ್ಯಕ್ತಿಯನ್ನು ಪಾಲೋಲಿ ಸೇತುವೆ ಬಳಿ ಬೈಕ್ ನಿಂದ ಇಳಿಸಿ ಕ್ಷಣಮಾತ್ರದಲ್ಲಿ ಹಂದಿ ಮಾಂಸ ತರುವುದಾಗಿ ಹೇಳಿ ವಂಚಿಸಿದ್ದ. ವಂಚಿಸಿದ ವ್ಯಕ್ತಿ ತನ್ನ ಬೈಕ್ ನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿತ್ತು.ಆ ಸಂದರ್ಭದಲ್ಲಿ ಯಾರೂ ಠಾಣೆಗೆ ದೂರು ನೀಡದ ಕಾರಣ ಪೊಲೀಸರು ಗಂಭೀರವಾಗಿ ಪರಿಗಣಿಸಿರಲಿಲ್ಲ.

Leave a Reply

Your email address will not be published. Required fields are marked *