Sun. Apr 20th, 2025

Belthangady: ಸಂಪನ್ನಗೊಂಡ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಬೆಳ್ತಂಗಡಿ: (ಎ. 20 ): ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ ಮತ್ತು ‘ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 31ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಅರಸಿನಮಕ್ಕಿ ಹತ್ಯಡ್ಕ ಸಿ. ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಿತು.

ಇದನ್ನೂ ಓದಿ: 🛑ಮಂಗಳೂರು: ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರಗಳಲ್ಲಿ ಅನಗತ್ಯ ಉಪಕ್ರಮಗಳಿಂದ ಗೊಂದಲಗಳನ್ನು ಉಂಟು ಮಾಡದಂತೆ ವಿದ್ಯಾರ್ಥಿ ಪರಿಷತ್ ಆಗ್ರಹ

ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅಧ್ಯಕ್ಷರಾದ ಶ್ರೀ ರಾಘವೇಂದ್ರ ನಾಯಕ್ ಬರ್ಗುಳ ಅರಸಿನಮಕ್ಕಿ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟರುವುದು ಬಹಳ ಸಂತೋಷದ ವಿಷಯ ಹಾಗೂ ಸ್ವ – ಉದ್ಯೋಗಕ್ಕೆ ಸಮಾಜದಲ್ಲಿ ಹಲವಾರು ಬೇಡಿಕೆಗಳು ಇದ್ದು ಕಲಿತ ವಿದ್ಯೆಯನ್ನು ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ – ಉದ್ಯೋಗದ ಅವಕಾಶವಿರುತ್ತದೆ.
ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಯಾರಿಗೂ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ರೇಷ್ಮಾ ಜಯಪ್ರಸಾದ್ ಶೆಟ್ಟಿಗಾರ್ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು.

ಸಂಸ್ಥೆಯ ಪರವಾಗಿ ಶ್ರೀಮತಿ ರೇಷ್ಮಾ ಜಯಪ್ರಸಾದ್ ಶೆಟ್ಟಿ ಗಾರ್ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಸುಧೀರ್ ಕುಮಾರ್, ಕನ್ಯಾಡಿ ಸೇವಾಭಾರತಿ ಸಲಹಾ ಮಂಡಳಿ ಸದಸ್ಯರಾದ ಶ್ರೀ ಉದಯಶಂಕ‌ರ್ ಕೆ, ಸೇವಾಭಾರತಿ ಕಾರ್ಯದರ್ಶಿ ಶ್ರೀ ಬಾಲಕೃಷ್ಣ, ಮಾಜಿ ಸದಸ್ಯರು, ತಾಲೂಕು ಪಂಚಾಯತ್ ಶ್ರೀಮತಿ ಮಂಜುಳಾ ಕಾರಂತ್, ಶಿಶಿಲ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಸಖಿ ಶ್ರೀಮತಿ ಧನ್ಯ ಗಣೇಶ್ ಹೊಸ್ತೋಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 29 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಶ್ರೀಮತಿ ಭವ್ಯ ಸ್ವಾಗತಿಸಿ, ಡಾಕ್ಯುಮೆಂಟೇಶನ್, ಮಾನಿಟರಿಂಗ್ ಮತ್ತು ಇವಲ್ಯೂವೇಟಿಂಗ್ ಕಾರ್ಡಿನೇಟರ್ ಸುಮ ಕಾರ್ಯಕ್ರಮ ನಿರೂಪಿಸಿ, ಕು. ರಶ್ಮಿತ ಧನ್ಯವಾದವಿತ್ತರು.

Leave a Reply

Your email address will not be published. Required fields are marked *