ನೆಲ್ಯಾಡಿ:(ಎ.21) ಕಾರು ಮತ್ತು ಆಟೋರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ವಾಲ್ತಾಜೆ ಸೇತುವೆ ಬಳಿ ನಡೆದಿದೆ.

ಅಪಘಾತದಲ್ಲಿ ಆಟೋರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ(40 ವ.) ಮೃತ ವ್ಯಕ್ತಿ.
ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಆಟೋ, ಬೆಂಗಳೂರಿನಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಕಾರು ನಡುವೆ ಅಪಘಾತ ಸಂಭವಿಸಿದೆ.



ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

