ಬೆಂಗಳೂರು (ಎ.21): ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಿವಾಸದಲ್ಲಿ ಓಂ ಪ್ರಕಾಶ್ ಅವರನ್ನು ಕೊಲೆ ಮಾಡಿದ್ದಾರೆ.

ಇದನ್ನೂ ಓದಿ: ⭕ಮೂಡುಬಿದಿರೆ: ಬಸ್ ಗೆ ಡಿಕ್ಕಿ ಹೊಡೆದ ಬೈಕ್
ಓಂ ಪ್ರಕಾಶ್ ಅವರು 1981ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಓಂ ಪ್ರಕಾಶ್ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ& ಐಜಿಪಿಯಾಗಿದ್ದರು.

ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹೆಂಡತಿಯೇ ಈ ಕೊಲೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಓಂ ಪ್ರಕಾಶ್ ಪತ್ನಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಓಂ ಪ್ರಕಾಶ್ ಅವರ ಮೃತದೇವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.


